Astrology: ಈ ರಾಶಿಯವರಿಗೆ ಆರ್ಥಿಕ ಮುಗ್ಗಟ್ಟು ಕಾಡಬಹುದು, ಜಾಗರೂಕರಾಗಿರಿ| ದಿನ ಭವಿಷ್ಯ
Astrology: ಈ ರಾಶಿಯವರಿಗೆ ಆರ್ಥಿಕ ಮುಗ್ಗಟ್ಟು ಕಾಡಬಹುದು, ಜಾಗರೂಕರಾಗಿರಿ| ದಿನ ಭವಿಷ್ಯ

ಶುಕ್ರವಾರ, ಸೆಪ್ಟೆಂಬರ್ 06, 2024, ದೈನಂದಿನ ರಾಶಿ ಭವಿಷ್ಯ 

ಮೇಷ ರಾಶಿ: ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯ ವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ವಿದೆ. ದಿನಾಂತ್ಯದಲ್ಲಿ ಸಂಭ್ರಮ ಸಡಗರದಿಂದ ಮುಗಿಯಲಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸ ಗಳಾದರೂ ಕೆಲವು ಹಿತ ಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾ ಗಲಿದೆ.ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿರಿ.ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು, ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮಕ್ಕಳ ವಿದ್ಯಾಭ್ಯಾಸ, ಉದ್ಯೋಗದ ಸಮಸ್ಯೆ ಕಂಡು ಬರಬಹುದು.ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭ ಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಕೆಟ್ಟ ಜನರ ಸಹವಾಸ ದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಕೆಲಸ ಕಾರ್ಯಗಳಲ್ಲಿ ವಿಘ್ನ ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ.ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹು ವಿನಿಂದಾಗಿ ಹಾಗೂ ಶನಿಯ ಲಾಭ ಸ್ಥಾನದಿಂದಾಗಿ ಉನ್ನತಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ.ಸಂಧಿ ನೋವು ಮೂಳೆ ಮುರಿತ,ಅವಘಡಗಳಿಗೆ ಕಾರಣ ವಾದೀತು.ಆಲಸ್ಯ,ಉದಾಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ.ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾ ಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ.ಮುಖ್ಯವಾಗಿ ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಹಿಸಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ:ವಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತ ವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ.ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗ ದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಗೌರಿ ವ್ರತ: ಈ ಸಂವತ್ಸರದಲ್ಲಿ ಭಾದ್ರಪದ ಶುಕ್ಲಪಕ್ಷ ತೃತೀಯ ದಿನಾಂಕ 6-9-2024 ಶುಕ್ರವಾರ ಸ್ವರ್ಣಗೌರಿ ವ್ರತಾಚರಣೆ. ಬೆಳಗ್ಗೆ 9.20 ರಿಂದ 10.20 ಗಂಟೆ ಸ್ವರ್ಣಗೌರಿ ಆವಾಹನೆಗೆ ಶುಭಕಾಲ.

ತಿಥಿ: ತೃತೀಯ 

ನಕ್ಷತ್ರ: ಹಸ್ತ ನಕ್ಷತ್ರ 

ರಾಹುಕಾಲ: 10:30AM ರಿಂದ 12:00PM

ಗುಳಿಕಕಾಲ: 07:30AM ರಿಂದ 09:00AM

ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು,ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

others

HL

politics

HL

others

HL

crime

HL

politics

HL

economy

HL

health