ಡಾ.ಎಂ.ವೀರಪ್ಪಮೊಯ್ಲಿ ಕನಸು ನನಸು; ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಸಿಎಂ, ಡಿಸಿಎಂ ಚಾಲನೆ..!| ವಿಡಿಯೋ ನೋಡಿ
ಡಾ.ಎಂ.ವೀರಪ್ಪಮೊಯ್ಲಿ ಕನಸು ನನಸು; ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಸಿಎಂ, ಡಿಸಿಎಂ ಚಾಲನೆ..!| ವಿಡಿಯೋ ನೋಡಿ

ಸಕಲೇಶಪುರ, (ಸೆ.06); ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪಮೊಯ್ಲಿ ಅವರ ಕನಸಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಈ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ  ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. 

ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು.

ಬಳಿಕ ಇವರ ಮಾರ್ಗದರ್ಶನದಲ್ಲೇ ಹೆಬ್ಬಹಳ್ಳಿಯ ವಿತರಣಾ ತೊಟ್ಟಿ 4 ರಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು. 

ಗೌರಿ ಹಬ್ಬದ ಪ್ರಯುಕ್ತ ತಾಯಿ ಸನ್ನಿದಿಯಲ್ಲಿ ಪೂಜಾ ಕಾರ್ಯಗಳ ಒತ್ತಡ ಇದ್ದರೂ  ಯೋಜನೆಯ ಉದ್ಘಾಟನೆಯ ಪೂಜಾ ಕಾರ್ಯಗಳನ್ನು ನೆರವೇರಿಸಲು ಒಪ್ಪಿ ಬಂದ ದೀಕ್ಷಿತರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಅರ್ಪಿಸಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime