ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ: ಸ್ಪರ್ಧೆ ಬಗ್ಗೆ ಏನ್ ಹೇಳಿದ್ದಾರೆ ನೋಡಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ: ಸ್ಪರ್ಧೆ ಬಗ್ಗೆ ಏನ್ ಹೇಳಿದ್ದಾರೆ ನೋಡಿ

ರಾಮನಗರ, (ಸೆ.06): ಚನ್ನಪಟ್ಟಣದ ದೊಡ್ಡಮಳೂರು ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ಯುವಕರಿಗೆ ಗೌರಿ ಗಣೇಶ  ಮೂರ್ತಿಯನ್ನು ವಿತರಣೆ ಮಾಡಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದರು ಅವರು, ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ತಿಳಿಸಿದರು.ನಮ್ಮ ರಾಜ್ಯದ ರೈತಾಪಿ ವರ್ಗಕ್ಕೆ ಮಳೆ ಬೆಳೆ ಆಗಲಿ, ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಗಲಿ ಜೊತೆಗೆ ಇಡೀ ರಾಜ್ಯದ ಜನತೆಗೆ ಅರೋಗ್ಯ, ಆಯಸ್ಸು, ನೆಮ್ಮದಿ ಕಲ್ಪಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಜಯಮುತ್ತು ಅವರು ಉಚಿತ ಗಣೇಶ ಮೂರ್ತಿಗಳನ್ನು ವಿತರಣೆ ಮಾಡಿಕೊಂಡು ಬಂದಿದ್ದಾರೆ.ಈ ಬಾರಿ ನಾನೂ ಭಾಗವಹಿಸಿ ಯುವಕರಿಗೆ ಗಣೇಶ ವಿತರಿಸುತ್ತಿದ್ದೇನೆ ಎಂದು ತಿಳಿಸಿದರು

ಗೆಲುವುದಕ್ಕೆ ಕಾರ್ಯಕರ್ತರು ಸಜ್ಜಾಗಬೇಕು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ.ಎಲ್ಲರ ಅಭಿಪ್ರಾಯಗಳನ್ನ ವರಿಷ್ಠರಿಗೆ ತಲುಪಿಸುವ ಕೆಲಸ ಆಗ್ತಿದೆ. ಅಂತಿಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು.ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಆರೋಗ್ಯಕರ ಚುನಾವಣೆ ನಡೆಯಬೇಕು: ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಮಾತನಾಡಿದ ಅವರು, ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.ಬಿಜೆಪಿಯ ಹಿರಿಯ ವರಿಷ್ಠರ ಜೊತೆಗೂ ಕೂಡ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು.ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡ್ತಾರೆ. ಅಂತಿಮವಾಗಿ NDA ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತೇವೆ ಎಂದರು.

ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿ: ಒಟ್ನಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿ ಹಾಕುವ ಕೆಲಸವನ್ನ ಹೈಕಮಾಂಡ್ ಮಾಡುತ್ತೆ ಎಂದು ನಿಖಿಲ್ ಕುಮಾರಸ್ವಾಮಿಯವರು ತಿಳಿಸಿದರು..

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime