ಭೀಕರ ಅಪಘಾತ; ಎರಡು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವತಿ ದುರ್ಮರಣ.!
ಭೀಕರ ಅಪಘಾತ; ಎರಡು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವತಿ ದುರ್ಮರಣ.!

ಬಂಟ್ವಾಳ, (ಸೆ.07): ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸಂಭವಿಸಿದೆ.  

ಮೃತರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಇದೇ ತಿಂಗಳ ಸೆಪ್ಟೆಂಬರ್.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಲೆಕ್ಕಾಚಾರ ಮಾಡಲು ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದ್ದು, ವಾಪಾಸ್​ ಮನೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime