ದೊಡ್ಡಬಳ್ಳಾಪುರ: ಗಣೇಶನ ನೋಡಲು ತೆರಳಿದ್ದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವು..!
ದೊಡ್ಡಬಳ್ಳಾಪುರ: ಗಣೇಶನ ನೋಡಲು ತೆರಳಿದ್ದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವು..!

ದೊಡ್ಡಬಳ್ಳಾಪುರ, (ಸೆ.09); ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರತಿಷ್ಟಾಪಿಸಿದ್ದ ಗಣೇಶ ಮೂರ್ತಿಯನ್ನು ನೋಡಲು ತೆರಳಿದ್ದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿರುವ ದುರ್ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಸಂಭವಿಸಿದೆ.

ಮೃತ ಬಾಲಕಿಯನ್ನು ಶ್ರೀನಿವಾಸ್ ಎನ್ನುವವರ ಪುತ್ರಿ 13 ವರ್ಷದ ಚೇತನ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ಗಣೇಶ ಮೂರ್ತಿಯನ್ನು ನೋಡಲು ತೆರಳಿದ್ದ ವೇಳೆ, ವಿದ್ಯುತ್ ಅಲಂಕಾರ ಮಾಡಲು ಅಳವಡಿಸಿದ್ದ ವೈರ್ ಸ್ಕಿನ್ ಔಟ್ ಆಗಿದ್ದು, ಬಾಲಕಿ ಚೈತ್ರ ಗಮನಿಸದೆ ತುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.

ಕೂಡಲೇ ಬಾಲಕಿಯನ್ನು ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

crime

HL

crime

HL

others

HL

others

HL

others

HL

others

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art