ಸಿದ್ದು ಸರ್ಕಾರಕ್ಕೆ ಟೈಮ್ ಬಾಂಬ್ ಫಿಕ್ಸ್ ಆಗಿದೆ; ಸಿಟಿ ರವಿ
ಸಿದ್ದು ಸರ್ಕಾರಕ್ಕೆ ಟೈಮ್ ಬಾಂಬ್ ಫಿಕ್ಸ್ ಆಗಿದೆ; ಸಿಟಿ ರವಿ

ಹುಬ್ಬಳ್ಳಿ, (ಸೆ.9): ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿರುವಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೀಪಾವಳಿ ಹಬ್ಬದೊಳಗೆ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿಯ ನಂತರ ಸರ್ಕಾರ ಪತನ ಎಂಬುದು ದೂರ ಆಯ್ತು. ನನಗಿರುವ ಮಾಹಿತಿ ಪ್ರಕಾರ ದೀಪಾವಳಿಯೊಳಗೆ ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗಲಿದೆ ಎಂದಿದ್ದಾರೆ.

ಹೊಸ ಸಿಎಂ, ಹೊಸ ಸರ್ಕಾರನಾ ಅಂದರೆ ಕಾಲ ನಿರ್ಣಯ ಮಾಡುತ್ತದೆ. ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ ಮುಹೂರ್ತ ನಿಗದಿ ಮಾಡಿದೆ. ಹೊರಗಡೆ ಸಿದ್ದರಾಮಯ್ಯ ಅವರ ಹಿಂದೆ ಬಂಡೆಯಂತೆ ನಿಂತಿದ್ದೀವಿ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಮನೆಗೆ ಹೋಗುವುದ ಫಿಕ್ಸ್ ಆಗಿದ್ದು, ಹೀಗಾಗಿ ಸ್ಪರ್ಧೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ಒಂದು ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣ ಪಿತೂರಿಗೆ ಬಲಿಯಾಗಿದ್ದಾರೆ ಎಂದಿದ್ದರು. ಈಗ ನೀವು ಸಂಗೊಳ್ಳಿ ರಾಯಣ್ಣ ಎಂದು ನಾನು ಭಾವಿಸುವುದಲ್ಲ ಎಂದು ಟೀಕಿಸಿದರು.

ಸರ್ಕಾರದಲ್ಲಿ ಹಗರಣ ನಡೆದಿರುವುದು ಸ್ಪಷ್ಟ; ಸರ್ಕಾರದಲ್ಲಿ ಬರೀ ಹಗರಣಗಳೇ ಸುದ್ದಿ. ಇದು ಬ್ರಷ್ಟಾಚಾರದ ಸರ್ಕಾರ.ಉಪ್ಪು ತಿಂದವರು ನೀರು ಕುಡಿಯಲಬೇಕು. ಕಳ್ಳನ ಹೆಂಡತಿ ಡ್ಯಾಶ್ ಡ್ಯಾಶ್ ಎಂದು ಗುಡುಗಿದರು. ಸುಳ್ಳು ಲೆಕ್ಕ, ಕಳ್ಳ ಬಿಲ್ಲು 100 ಪರ್ಸೆಂಟ್ ಲೂಟಿ. ಅವರ ಹಗರಣ ಮರೆಮಾಚೋಕೆ ಇನ್ನೊಬ್ಬರ ಕಡೆ ಬೊಟ್ಟು ಮಾಡುವುದು, ತಪ್ಪು ಯಾರೇ ಮಾಡಿದರೂ ತಪ್ಪೇ. ಅವರ ತರಹ ಜಾತಿ ಗುರಾಣಿ ಬಳಸಲ್ಲ, ಭ್ರಷ್ಟಾಚಾರ ಮುಚ್ಚಿ ಹಾಕೋಕೆ ಸಾಧ್ಯ ಇಲ್ಲ. ಸತ್ಯ ಯಾವತ್ತಾದರೂ ಹೊರಬರಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟರು ಬಹಳ ದಿನ ಅಧಿಕಾರದಲ್ಲಿ ಇರಬಾರದು. ನಾವು ಇವತ್ತು ಈದ್ಧಾ ಮೈದಾನದಲ್ಲಿ ಭಗವಾದಜಾ ಹಾರಿಸಿದ್ದೇವೆ. ಮೂವತ್ತು ವರ್ಷಗಳ ಹಿಂದೆ ನಾನು ಇಲ್ಲಿ ಹೋರಾಟ ಮಾಡುವುದಕ್ಕೆ ಬಂದಿದ್ದೆ. ಇವತ್ತು ಇಲ್ಲಿ ಭಗವಾಧ್ವಜಾ ಹಾರಿಸಿದ್ದೇವೆ. ಇದು ನಮ್ಮ ಭೂಮಿ, ಹಿಂದುತ್ವ ಬಿಟ್ಟು ಭಾರತ ಇಲ್ಲ, ಭಾರತ ಬಿಟ್ಟು ಹಿಂದೂತ್ತ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಗಣೇಶಮೂರ್ತಿ ಪ್ರತಿಷ್ಠಾಪನೆಯಾಗಿದೆ. ಭಾರತ ಅಂದರೆ ಚೈತನ್ಯ ಭೂಮಿ, ಕರ್ಮ ಭೂಮಿ ಎಂದು ಅವರು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

crime

HL

crime

HL

others

HL

others

HL

others

HL

others

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art