ಅಪಘಾತ ನಡೆದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ, ಪರಿಶೀಲನೆ| ವಿಡಿಯೋ
ಅಪಘಾತ ನಡೆದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ, ಪರಿಶೀಲನೆ| ವಿಡಿಯೋ

ಮಧುಗಿರಿ, (ಸೆ.9); ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಬಳಿಕ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದರು. ಧೈರ್ಯ ತೆಗೆದುಕೊಳ್ಳುವಂತೆ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಘಟನೆಗೆ ಮರುಕ ವ್ಯಕ್ತಪಡಿಸಿದರು.

ಘಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ ಅವರು, ಕಾರುಗಳು ಅಪಘಾತ ಸಂಭವಿಸಿದ ರಸ್ತೆ ನೇರವಾಗಿದೆ. ಈ ಘಟನೆ ನಡೆದಿರುವುದು ಅಚ್ಚರಿ ಮೂಡಿಸಿದೆ. ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸುವ ಶಕ್ತಿ ನೀಡಲಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಲಾಭು ರಾಮ್ ಅವರು ಆಗಮಿಸಿದ್ದಾರೆ. ಘಟನೆಗೆ ನಿಖರವಾದ ಕಾರಣವೇನು? ಇಂತಹ ಘಟನೆಗಳು ಮರುಕಳಿಸದಂತೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಅಪಘಾತ ನಿಯಂತ್ರಿಸಲು ಇಲಾಖೆಯ ಅನುದಾನವನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಪಘಾತ ವಲಯ, ರಸ್ತೆ ತಿರುವುಗಳನ್ನು ಗುರುತಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಮೈಸೂರು ಹೆದ್ದಾರಿಯಲ್ಲಿ ಕಳೆದ ವರ್ಷ, ನಾಲ್ಕು ತಿಂಗಳ ಅವಧಿಯಲ್ಲಿ ನೂರಕ್ಕು ಹೆಚ್ಚು ಜನ ಮೃತಪಟ್ಟಿದ್ದರು. ಈಗ ಕ್ರಮ ತೆಗೆದುಕೊಂಡ ಬಳಿಕ ಅಪಘಾತ ಇಳಿಕೆಯಾಗಿದೆ. ಅಪಘಾತದಿಂದ ಸಾವನ್ನಪ್ಪುವ ಪ್ರಮಾಣ ಕಡಿಮೆಯಾಗಿದೆ. ರಸ್ತೆ ಸುರಕ್ಷತಾ ಕ್ರಮಕೈಗೊಳ್ಳಲು ನೂರು ಕೋಟಿ ರೂ. ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ರಸ್ತೆಗಳು ಚೆನ್ನಾಗಿರುವುದರಿಂದ ಸ್ವಾಭಾವಿಕವಾಗಿ ವಾಹನಗಳು ವೇಗವಾಗಿ ಚಲಿಸುತ್ತಿವೆ. ಮೈಸೂರು ರಸ್ತೆಯಲ್ಲಿ ಎಐ ಆಧರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚಿನ ವೇಗದಲ್ಲಿ ಹೋಗುವ ವಾಹನಗಳನ್ನು ಗುರುತಿಸಿ ದಂಡ ವಿಧಿಸಲಾಗುತ್ತಿದೆ. ಅದೇರೀತಿ, ರಾಜ್ಯ ಹೆದ್ದಾರಿಗಳಲ್ಲಿ ಕೈಗೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಯುತ್ತಿದೆ. ಸಾರಿಗೆ ಇಲಾಖೆಯೊಂದಿಗೆ ಕೈಜೋಡಿಸಿ ವಾಹನ ಚಾಲಕರಿಗೆ ತಿಳುವಳಿಕೆ ಮೂಡಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಕೇಂದ್ರ ವಲಯ ಐಜಿಪಿ ಲಾಭು ರಾಮ್, ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ ಅವರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

health

HL

crime

HL

crime

HL

others

HL

others

HL

others

HL

others

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art